ಹುಬ್ಬಳ್ಳಿ: ಹೀಟ್ ಸ್ಟ್ರೋಕ್ಗೆ ಅಗತ್ಯ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿರುವ ಅವರು, ಹೀಟ್ ಸ್ಟ್ರೋಕ್ನಿಂದ ಬಳಲುವವರಿಗೆ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲು ಕ್ರಮ ಜರುಗಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕಾಗಿ ಪ್ರತ್ಯೇಕವಾರ್ಡ್ಗಳನ್ನು ಕಾಯ್ದಿರಿಸಲಾಗಿದೆ. ಇದುವರೆಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ 225 ವೈದ್ಯರ ನೇಮಕಾತಿಗೆ ಅನುಮೋದನೆ ದೊರಕಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಮಾತ್ರೆಗಳನ್ನು ಇಡಲಾಗುವುದು. ಜನರಿಕ್ ಔಷಧಿಗಳಿಗೆ ಅವಕಾಶವಿಲ್ಲ ಎಂದಿರುವ ಅವರು, ಈ ಸಂಬಂಧ ಕೆಲವರು ಕೋರ್ಟ್ಗೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಡೆದ ದುರ್ಬಳಕೆ ಸಂಬಂಧ ನ್ಯಾಯಮೂರ್ತಿ ಮೈಕೆಲ್ ಕುನ್ನಾ ಅವರು ನೀಡಿರುವ ವರದಿ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಕರ್ತರು ಕೇಳಿದ ರಾಜಕೀಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿಯಾವುದೇ ಸಮಸ್ಯೆಯಿಲ್ಲ, ಗೊಂದಲವಿಲ್ಲ, ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದಿದ್ದಾರೆ. ಅತೀ ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಬಹುದು. ಕೆಲವರು ಹಿರಿಯರನ್ನು ಬಿಟ್ಟು ಸಂಪುಟ ವಿಸ್ತರಣೆಯಾಗಬಹುದು, ಅದಕ್ಕಾಗಿ ಕೆಲವರು ಒತ್ತಾಯಿಸಿದ್ದಾರೆ. ಎಲ್ಲರಿಗೂ ಅವಕಾಶ ದೊರೆಯಬೇಕೆಂಬ ದೊಡ್ಡಗುಣ ಇರಬೇಕಲ್ವಾ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ಹೀಟ್ ಸ್ಟ್ರೋಕ್ಗೆ ಅಗತ್ಯ ಚಿಕಿತ್ಸೆ



