ಕನಕಪುರ: ಇನ್ನೂ ಬದುಕಿ ಬಾಳಬೇಕಿದ್ದ ೩೬ ವರ್ಷ ಪ್ರಾಯದ ಅವಿವಾಹಿತ ಯುವಕನೋರ್ವ ದಿಡೀರ್ ಅನಾರೋಗ್ಯ ಸಮಸ್ಯೆಯಿಂದಾಗಿ ಆಕಸ್ಮಿಕ ಸಾವಿಗೀಡಾದ ಘಟನೆಯೊಂದು ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ ತೆಂಗಿನ ಮರದದೊಡ್ಡಿ ಗ್ರಾಮದ ಗ್ರಾಮದ ಲೇಟ್ ಶಿವಕುಮಾರ್ ರವರ ಮಗ ಸುರೇಶ್.ಎಸ್ ಮೃತ ವ್ಯಕ್ತಿಯಾಗಿದ್ದು, ನಗರದ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಕಳೆದ ಮೂರು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಹೊಟ್ಟೆ ಉರಿಯಿಂದಾಗಿ ಕುಟುಂಬಸ್ಥರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕೆತ್ಸೆ ಕೊಡಿಸುತ್ತಿದ್ದರು, ಆದರೆ ದುರಾಧೃಷ್ಟವಶತ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಮೃತರು ತಾಯಿ ಹಾಗೂ ಓರ್ವ ಸಹೋದರ ಸೇರಿದಂತೆ ಬಂಧು ಬಳಗ ಮತ್ತು ಅಪಾರ ಸ್ನೇಹಿತರನ್ನು ಅಗಲಿದ್ದಾರೆ, ಆದರೆ ಇಂತಹ ದುಃಖದ ಸಂದರ್ಭದಲ್ಲಿಯೂ ಮೃತನ ಸಹೋದರ ಮೋಹನ್ ಎಂಬುವವರು ತನ್ನ ತಮ್ಮನ ಎರಡೂ ಕಣ್ಣುಗಳನ್ನು ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗೋ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ನಗರದ ಕೆಎಸ್ಆರ್ಟಿಸಿ ಡಿಪೋದಲ್ಲಿ ನೆರೆದಿದ್ದ ಚಾಲಕರು ನಿರ್ವಾಹಕರು ಹಾಗೂ ಸಿಬ್ಬಂದಿ ವರ್ಗದವರು ಸಹೋದ್ಯೋಗಿಯ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು, ನಂತರ ಮೃತರ ಸ್ವಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಅಪಾರ ಸಂಖ್ಯೆಯ ಬಂಧು ಬಳಗದವರು ಸೇರಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.