ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ಅವರು ಪ್ರತೀ ಶುಕ್ರವಾರ ಸಾರ್ವಜನಿಕರೊಂದಿಗೆ ಫೋನ್-ಇನ್ ಕಾರ್ಯಕ್ರಮ ಆರಂಭಿಸಿದ್ದು, ಈ ವಾರದ ಫೋನ್-ಇನ್ ಕಾರ್ಯಕ್ರಮವು 2026 ರ ಜುಲೈ, 17 ರಂದು (ಶುಕ್ರವಾರ) ಬೆಳಿಗ್ಗೆ 7.00ರಿಂದ 9.00 ಗಂಟೆಯವರೆಗೆ ನಡೆಯಲಿದೆ. ಈ ಅವಧಿಯಲ್ಲಿ ನಾಗರಿಕರು ರಸ್ತೆ ಗುಂಡಿಗಳು ಹಾಗೂ ದುರಸ್ತಿ ಕಾರ್ಯಗಳು, ಬೀದಿ ದೀಪಗಳ ನಿರ್ವಹಣೆ, ಮನೆಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿ, ಅಪಾಯಕಾರಿಯಾದ ಮರಗಳು/ಕೊಂಬೆಗಳ ತೆರವು, ಸೊಳ್ಳೆ ನಿಯಂತ್ರಣ ಕ್ರಮಗಳು, ಬೀದಿ ನಾಯಿಗಳ ನಿಯಂತ್ರಣ, ಉದ್ಯಾನವನಗಳ ಅಭಿವೃದ್ಧಿ ಹಾಗೂ



