ಹೊಸದಿಲ್ಲಿ: ಪ್ರತಿಷ್ಠಿತ ಟೈಮ್ ನಿಯತಕಾಲಿಕೆಯ 100 ಪ್ರಭಾವಿಗಳ ಪಟ್ಟಿಯಲ್ಲಿ ಭಾರತದ ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್ ಸ್ಥಾನ ಪಡೆದಿದ್ದಾರೆ.ಒಲಿಂಪಿಕ್ನಲ್ಲಿ ಕಂಚಿನ ಪದಕ ಗೆದ್ದಿರುವ ಸಾಕ್ಷಿ, 2023ರ ಜನವರಿಯಿಂದ ಸತತವಾಗಿ, ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಸಾಕ್ಷಿ, ಕುಸ್ತಿಯನ್ನೇ ತ್ಯಜಿಸುವ ಮಟ್ಟಕ್ಕೆ ಹೋಗಿದ್ದರು.ಇವರೊಂದಿಗೆ ವಿನೇಶ್ ಫೊಗಾಟ್, ಬಜರಂಗ್ ಪುನಿಯ ಕೈಜೋಡಿಸಿದ್ದರು. ಅವರ ಹೋರಾಟ ಭಾರತ ಮಾತ್ರವಲ್ಲ, ವಿಶ್ವಾದ್ಯಂತ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಸಾಕ್ಷಿಗೆ ಟೈಮ್ ನಿಯತಕಾಲಿಕೆಯ ಪ್ರಭಾವಿಗಳ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.