ಬೆಂಗಳೂರು : ಮಾ.17. ಕ್ಷೇತ್ರದ ಜನತೆಗೆ ಯಾವುದೇ ರೀತಿಯ ಕುಂದು ಕೊರತೆಗಳು ಬರದೆ ಇರುವ ರೀತಿಯಲ್ಲಿ ಸೇವೆ ಸಲ್ಲಿಸಿದ್ದೇನೆ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಲು ಸದಾ ಸಿದ್ಧನಾಗಿದ್ದೇನೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಪಶ್ಚಿಮ ವಲಯದಲ್ಲಿ, ಬಿಬಿಎಂಪಿಯ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ‘ಹೊಲಿಗೆ ಯಂತ್ರ ವಿತರಣಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಜನತಾ ಪಾರ್ಟಿ ನಮ್ಮ ಪಕ್ಷವು ಆಡಳಿತಕ್ಕೆ ಬಂದಾಗಿನಿಂದ ಅನೇಕ ಅಭಿವೃದ್ಧಿಗಳನ್ನು ಮಾಡುತ್ತಿದ್ದೇವೆ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಬೇಕು ಎಂಬುದನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಇಂದು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ತಂತ್ರಾಂಶದ ಕಾರ್ಯಕ್ರಮ, ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ ಹಾಗೂ ಕಾರ್ಮಿಕ ಇಲಾಖೆಯಿಂದ 500 ಮಂದಿ ಫಲಾನುಭವಿಗಳಿಗೆ ನೀಡಲಾಗುವುದು ಎಂದರು. ಹಿಂದೆ ಇದ್ದಂತಹ ಸರ್ಕಾರಗಳು ಮಾಡದೇ ಇರುವ ಉತ್ತಮ ಕೆಲಸವನ್ನು ನಮ್ಮ ಬಿಜೆಪಿ ಸರ್ಕಾರ ಕಳೆದ ಮೂರೂವರೆ ವರ್ಷಗಳಿಂದ ಮಾಡುತ್ತಾ ಬಂದಿದೆ. ನನ್ನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಮೂರುವರೆ ಸಾವಿರ ಲ್ಯಾಪ್ ಟಾಪ್ ವಿತರಿಸಿದ್ದೇನೆ ಎಂದು ಹೇಳಿದರು.
ಮಹಾಲಕ್ಷ್ಮಿ ಲೇಔಟ್ ನ 9 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದೇವೆ. ಉಚಿತವಾಗಿ ಥೈರಾಯಿಡ್, ಬಿ.ಪಿ, ಶುಗರ್ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು ಉಚಿತವಾಗಿ ನೀಡಲಾಗುವುದು ಇದರ ಜೊತೆಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಸಹ ವಿತರಿಸಲಾಗುತ್ತದೆ ಎಂದು ಹೇಳಿದರು.
ಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಮತ್ತು ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ವತಿಯಿಂದ ಕ್ಷೇತ್ರದ 10 ಕಡೆ ಶಾಲೆಗಳು ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿಯ ವಿಶೇಷ ಆಯುಕ್ತರಾದ ರೆಡ್ಡಿ ಶಂಕರ್ ಬಾಬು, ಉಪವಿಭಾಗಾಧಿಕಾರಿ ಚಂದ್ರಶೇಖರ್, ಮಂಜುನಾಥ್, ರವೀಂದ್ರಪ್ಪ, ಮಾಜಿ ಉಪಮೇಯದ ಎಸ್.ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಜೆಪಿ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ಜಯಸಿಂಹ, ಹನುಮಂತ್ ರಾಯಪ್ಪ, ಶ್ರೀನಿವಾಸ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ರಾಜೇಂದ್ರ ಕುಮಾರ್, ಪದ್ಮಾವತಿ ಶ್ರೀನಿವಾಸ್, ನಾಗರತ್ನಮ್ಮ ಹಾಗೂ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.
Leave a Review