ಬೆಂಗಳೂರು: ವಿಧಾನಸಭೆ ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲಾಗಿದೆ. ಸಭಾಪತಿ ಯು.ಟಿ. ಖಾದರ್ ನೇತೃತ್ವದಲ್ಲಿ ಇಂದು ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಸೋಮವಾರ ಒಂದು ದಿನಕ್ಕೆ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ.
ಹೀಗಾಗಿ ಅಂದು ಕಲಾಪ ನಡೆಯುವುದಿಲ್ಲ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.26 ರಂದು ಬೆಳಗ್ಗೆ 9:30ಕ್ಕೆ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸೇರಿದಂತೆ ಇತರೆ ಬಿಎಸಿ ಸದಸ್ಯರು ಭಾಗಿಯಾಗಿದ್ದರು.
ಕಲಾಪ ಸಲಹಾ ಸಮಿತಿ ಸಭೆಯ ನಂತರ ವಿಧಾನಸಭೆ ಕಲಾಪದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಈವಿಷಯವನ್ನು ಪ್ರಕಟಿಸಿದ್ದಾರೆ.