ಪೂರ್ಣ ಶ್ರೀ ಎಂಟರ್ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ಜಾಸ್ತಿ ಪ್ರೀತಿ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಮಿಡಿದ ಹೃದಯಗಳ ಮೌನರಾಗ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ.
ಎಸ್ಆರ್ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವುದು ಅರುಣ್ ಮಾನವ್.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಪ್ರೀತಿಯ ಅವ್ಯಕ್ತಭಾವ ಜಾಸ್ತಿಪ್ರೀತಿಯಾಗಿದೆ. ಸಿನಿಮಾ ಹುಟ್ಟಲು ಫೇಸ್ಬುಕ್ ಪೇಜ್ ಕಾರಣವಾಗಿದೆ. ಹೀಗೆ ಒಮ್ಮೆ ಎಫ್ಬಿ ನೋಡುವಾಗ ಒಂದು ಹುಡುಗಿಯ ಫೋಟೋ ನೋಡಿ ಕರುಳು ಚುರ್ ಅನಿಸಿತು. ಅದರ ಏಳೆಯನ್ನು ತೆಗೆದುಕೊಂಡು ಕಾಲ್ಪನಿಕ ಚಿತ್ರಕಥೆಯನ್ನು ಬರೆಯಲಾಯಿತು. ಎಲ್ಲಿಯೂ ನೋಡದೆ ಇರತಕ್ಕಂತ ಪ್ರೀತಿಯನ್ನು ಇದರಲ್ಲಿ ನೋಡಬಹುದು.
ಒಳ್ಳೆ ಮರವಾಗಬಲ್ಲ ಜಾಸ್ತಿಪ್ರೀತಿ ಆಗಿದೆ. ಯಾವುದೇ ವ್ಯಕ್ತಿಗೆ ಸಂಬಂದಪಟ್ಟಿರುವುದಿಲ್ಲ. ಬಂದಿರತಕ್ಕಂತ ಕಥೆಗಳು ಇರುವುದಿಲ್ಲ. ಯಾವ ದೃಶ್ಯವು ಹಿಂದಿನ ಚಿತ್ರದಲ್ಲಿ ನೋಡಿದಂತೆ ಭಾಸವಾಗುವುದಿಲ್ಲ. ವಿಭಿನ್ನ ನಿರೂಪಣೆ ಹೊಂದಿದ್ದು, ಪ್ರಾರಂಭದಿಂದ ಕೊನೆತನಕ ಊಹಿಸಲು ಕಷ್ಟವಾಗುತ್ತದೆ. ಪ್ರೀತಿಯನ್ನು ತೋರ್ಪಡಿಸಲಿಕ್ಕೆ ಆಗುವುದಿಲ್ಲವೋ, ಆಗ ಸೋತು ಹೋಗುತ್ತಾನೆ. ಅದನ್ನು ಇಲ್ಲಿ ಕಾಣಬಹುದು. ಬೆಂಗಳೂರು, ಬಂಗಾರಪೇಟೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ಬೇಗನೆ ತೆರೆಗೆ ತರಲು ಯೋಜನೆ ರೂಪಿಸಲಾಗಿದೆ. ಮಾಧ್ಯಮದ ಸಹಕಾರ ಬೇಕೆಂದು ಕೋರಿದರು.
ಸಾಹಿತಿ, ಕವಿ, ಚಿಂತಕ, ವಿಮರ್ಶಕ ಹಾಗೂ ಚಿತ್ರ ನಿರ್ದೇಶಕ ಎಲ್.ಎನ್.ಮುಕುಂದರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇವರು ಹೇಳುವಂತೆ ಕನ್ನಡ ಸಿನಿಮಾ ಬೇರೆ ಬೇರೆ ರೀತಿಯಲ್ಲಿ ಬೆಳೆದಿದೆ. ಅನೇಕ ಚಿತ್ರಗಳು ಜಗತ್ತಿನ ಸಿನಿಮಾಗಳ ಎದುರು ಸವಾಲು ಒಡ್ಡುವಂತ ಕೆಲಸ ಮಾಡುತ್ತಿದೆ. ಅದೇ ಸಾಲಿನಲ್ಲಿ ಜಾಸ್ತಿ ಪ್ರೀತಿ ಸೇರುತ್ತದೆ. ಸಿನಿಮಾ ಎಂಬುದು ಉದ್ಯಮವಾಗಿದೆ. ನೂರಾರು ಜನರ ಪ್ರತಿಭೆ ಮತ್ತು ಪರಿಶ್ರಮ ಒಳಗೊಂಡಿದೆ. ತಮಿಳು, ಮಲೆಯಾಳಂ ಚಿತ್ರಗಳಲ್ಲಿ ಅಲ್ಲಿನ ಪ್ರಸಿದ್ದ ಕವಿಗಳು ಸಾಹಿತ್ಯ ರಚಿಸುತ್ತಾರೆ.