ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಶ್ರೀರೂಪ, ಭಾ.ಆ.ಸೇ. ಇವರ ಹೆಸರನ್ನು ದುರುಪಯೋಗಪಡಿಸಿಕೊಂಡು “Iಚಿs Shಡಿee ಖooಠಿಚಿ” ಎಂಬ ಹೆಸರಿನಲ್ಲಿ ಯಾರೋ ದುರುದ್ದೇಶಪೂರಿತ ವ್ಯಕ್ತಿಗಳು ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ನಕಲಿ ಫೇಸ್ಬುಕ್ ಖಾತೆಗೂ ಜಿಲ್ಲಾಧಿಕಾರಿಗಳಿಗೂ ಅಥವಾ ಜಿಲ್ಲಾಡಳಿತಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ ಎಂದು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಲಾಗಿದೆ.
ಸದರಿ ನಕಲಿ ಸಾಮಾಜಿಕ ಜಾಲತಾಣ ಖಾತೆಯಿಂದ ಸಾರ್ವಜನಿಕರಿಗೆ ವಿವಿಧ ರೀತಿಯ ಆಮಿಷಗಳನ್ನು ಒಡ್ಡಲಾಗುತ್ತಿದ್ದು, ಇದರಿಂದ ಜಿಲ್ಲಾಧಿಕಾರಿಗಳ ಗೌರವಕ್ಕೆ ಹಾಗೂ ಜಿಲ್ಲಾಡಳಿತದ ಪ್ರತಿಷ್ಠೆಗೆ ಧಕ್ಕೆಯಾಗುವ ಸಂಭವವಿದೆ. ಅಲ್ಲದೇ, ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹಾಗೂ ಗೊಂದಲ ಉಂಟಾಗುವ ಸಾಧ್ಯತೆಯೂ ಕಂಡುಬAದಿದೆ.
ಸಾರ್ವಜನಿಕರು ಇಂತಹ ನಕಲಿ ಸಾಮಾಜಿಕ ಜಾಲತಾಣ ಖಾತೆಗಳ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗಬಾರದೆಂದು ಜಿಲ್ಲಾಡಳಿತ ಮನವಿ ಮಾಡಿದೆ.
ಇದೇ ವೇಳೆ, ನಕಲಿ ಖಾತೆ ಕಂಡುಬAದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ಅಥವಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರು ಮನವಿ ಮಾಡಿದ್ದಾರೆ.



