This is the title of the web page
This is the title of the web page

ಖ್ಯಾತ ನಟ, ನಿರ್ದೇಶಕ ಕೆ.ವಿಶ್ವನಾಥ್ ನಿಧನ

ಹೈದರಾಬಾದ್: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕ ಕಾಸಿನಾಧುನಿ ವಿಶ್ವನಾಥ್ ಅವರು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

92 ವರ್ಷದ ವಿಶ್ವನಾಥ್ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

`ಕಲಾತಪಸ್ವಿ’ ಎಂದೇ ಖ್ಯಾತರಾಗಿರುವ ವಿಶ್ವನಾಥ್, ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಪ್ರಮುಖ ಹೆಸರು ಸಂಪಾದಿಸಿದ್ದು, ಭಾರತೀಯ ಚಿತ್ರರಂಗದ ಅತ್ಯುನ್ನತ ಮನ್ನಣೆಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ 48ನೇ ಪುರಸ್ಕೃತರಾಗಿದ್ದಾರೆ ಎಂದು ವರದಿ ತಿಳಿಸಿದೆ.