ಬೆಂಗಳೂರು: ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಅವಮಾನಿಸಿದ್ದಾರೆ. ಅತಿರೇಕದ ವರ್ತನೆ ತೋರಿದ್ದಾರೆ. ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನ ಆಗಿದೆ. ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕೆ ರೈತನನ್ನ ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದಾರೆ.
ಬಡ ರೈತನ ಮೇಲೆ ಸಿಬ್ಬಂದಿಯ ವರ್ತನೆ ಪ್ರಯಾಣಿಕನ ಮೊಬೈಲ್ನಲ್ಲಿ ಸೆರೆಯಾಗಿದೆ. ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ಪ್ರಯಾಣಿಕರಿಗೆ ತೊಂದರೆ ಆಗುತ್ತೆ ಅಂತ ಒಳಗೆ ಬಿಡ್ತಿಲ್ಲ ಎಂದು ಪ್ರಯಾಣಿಕರಿಗೆ ಆಕ್ರೋಶ ಹೊರ ಹಾಕಿದ್ದಾರೆ. ಕೊನೆಗೆ ಸಿಬ್ಬಂದಿಗೆ ಕ್ಯಾರೇ ಮಾಡದೇ ಸಹ ಪ್ರಯಾಣಿಕರೇ ರೈತರನ್ನು ಕರೆದುಕೊಂಡು ಹೋಗಿದ್ದಾರೆ. ಸಿಬ್ಬಂದಿ ಅತಿರೇಕದ ವರ್ತನೆಯ ವಿಡಿಯೋ ಎಕ್ಸ್(ಟ್ವಿಟರ್)ನಲ್ಲಿ ಪೋಸ್ಟ್ ಮಾಡಲಾಗಿದೆ.
ಬಿಎಂಆರ್ಸಿಎಲ್ಗೆ ಟ್ಯಾಗ್ ಮಾಡಿ ವಿಐಪಿಗಳಿಗೆ ಮಾತ್ರನಾ ಮೆಟ್ರೋ ಅಂತ ಕಿಡಿಕಾರಿದ್ದಾರೆ. ರೈತ ಬೆಳೆ ಬೆಳೆದಿಲ್ಲ ಅಂದ್ರೆ ನೀವು ಏನು ತಿಂತೀರಾ ಅಂತ ಜನರು ಪ್ರಶ್ನೆ ಮಾಡಿದ್ದಾರೆ. ಮೆಟ್ರೋ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಟ್ವಿಟರ್ ಬಳಕೆದಾರರು ಆಗ್ರಹಿಸಿದ್ದಾರೆ. ಸಿಬ್ಬಂದಿಯ ಈ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಟ್ವಿಟ್ನಿಂದ ಜಾಗೃತಗೊಂಡ ಮೆಟ್ರೋ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಭದ್ರತಾ ಸಿಬ್ಬಂದಿಯ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.