ಬೆಳಗಾವಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಮನಸ್ಸು ಇಚ್ಛೆ ಹಲ್ಲೆ ಮಾಡಿದ್ದು, ಪೋಷಕರಿಗೆ ವಿದ್ಯಾರ್ಥಿ ಕರೆ ಮಾಡಿದ್ದಾನೆ ಎಂಬ ಒಂದೇ ಒಂದು ಕಾರಣಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಿನ ದಿನಗಳಲ್ಲಿ ಹೊಸ ಶಾಸನ ಜಾರಿಗೆ ತರಲಾಗುತ್ತದೆ ಎಂದು ತಿಳಿದರು