ಬೆಂಗಳೂರು : ೬೫ ವರ್ಷದ ವ್ಯಕ್ತಿ ನಾಲ್ಕನೇ ತರಗತಿ ಓದುತ್ತಿದ್ದ ೯ ವರ್ಷದ ಬಾಲಕೀಯ ಮೇಲೆ ಅತ್ಯಾಚಾರ / ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಗೊತ್ತಾದ ಹಿನ್ನೆಲೆಯಲ್ಲಿ ಭಯ ಬಿದ್ದು ಟಾಯ್ಲೆಟ್ ಕ್ಲೀನ್ ಮಾಡುವ ಹಾರ್ಪಿಕ್ ಕುಡಿದು, ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ.
ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು ಬಾಲಕಿಯ ಪೋಷಕರು ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಣಕಲ್ ನಲ್ಲಿ ವಾಸವಾಗಿದ್ದು ಬಾಲಕಿಯ ಪೋಷಕರು ನಿನ್ನೆ ದೂರು ನೀಡಿದ್ದರು. ಆರೋಪಿ ಅಂಬರೀಶ್ (೬೫) ಎಂಬ ವ್ಯಕ್ತಿ ಮೂಲತಃ ಬಾಗಲಕೋಟೆ ಜಿಲ್ಲೆಯವನಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ನಡೆಸಿ ಭಯ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಈತನ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.