ಬೆಳಗಾವಿ: ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲೆಯ ಅಥಣಿಯಲ್ಲಿ ರೈತರು, ಕನ್ನಡಪರ ಸಂಘಟನೆಗಳ ಬೆಂಬಲದೊAದಿಗೆ ಬಂದ್ಗೆ ಕರೆ ನೀಡಿದ್ದು, ಜಿಲ್ಲೆಯ ಪ್ರಮುಖ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯ ಅಥಣಿ, ಚಿಕ್ಕೋಡಿ, ಗುರ್ಲಾಪುರ, ಜಾಂಬೋಟಿ, ಗೋಕಾಕ್ ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅಂಗಡಿ-ಮಳಿಗೆಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಟ್ಟಿವೆ. ಗೋಕಾಕ್-ಅಥಣಿ ರಸ್ತೆ, ದರೂರ ಹಲ್ಯಾಳ ಸೇತುವೆ ಮೆಲೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ರೈತ ಸಂಘದ ಮುಖಂಡ ಗಣೇಶ ಈಳಿಗೇರ್ ನೇತೃತ್ವದಲ್ಲಿ ಗೋಕಾಕ್ ಪಟ್ಟಣದ ನಾಕಾ ನಂಬರ್ ಒನ್ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು, ರೈತರ ಈ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಕಬ್ಬಿಗೆ ೩,೫೦೦ರೂ. ದರ ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಎರಡು ದಿನದಲ್ಲಿ ದರ ಘೋಷಣೆ ಮಾಡದಿದ್ದರೆ ರಾಷ್ಟಿçÃಯ ಹೆದ್ದಾರಿ ನಾಲ್ಕು, ಬೆಂಗಳೂರು ಪುಣೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ರೈತರ ಈ ಪ್ರತಿಭಟನೆಯ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಗುರ್ಲಾಪುರದಲ್ಲಿ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ನ್ಯಾಯಯುತವಾಗಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಈ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸದಿದ್ದಾಗ ವಿರೋಧ ಪಕ್ಷವಾಗಿ ನಾವು ಬೆಂಬಲ ನೀಡಬೇಕಿದೆ. ಹಾಗಾಗಿ ನಾನು ಸಹ ಪಕ್ಷದ ಎಲ್ಲಾ ಮುಖಂಡರ ಜೊತೆಗೆ ಚರ್ಚೆ ಮಾಡಿ, ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ಬಂದಿದ್ದೇನೆ ಎಂದಿದ್ದಾರೆ.
ಅತಿವೃಷ್ಟಿ ಸಂದರ್ಭದಲ್ಲಿ ಸಹ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾನು ಪ್ರವಾಸ ಮಾಡಿದ್ದೆ. ಭೀಕರ ಮಳೆಯಿಂದ ತೊಂದರೆಗಿಡಾದಾಗ ಉಸ್ತುವಾರಿ ಸಚಿವರಾಗಲಿ, ಕಂದಾಯ ಸಚಿವರಾಗಲಿ, ಕೃಷಿ ಸಚಿವರಾಗಲಿ ಉತ್ತರ ಕರ್ನಾಟಕ ಪ್ರವಾಸ ಮಾಡಲಿಲ್ಲ. ರೈತರು ಕಾರ್ಖಾನೆಗಳಲ್ಲಿ ೬ ಮಿಲಿಯನ್ ಟನ್ ಕಬ್ಬು ಅರೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರಕ್ಕೆ ೫೦-೬೦ಸಾವಿರ ಕೋಟಿ ಆದಾಯ ಬರುತ್ತಿದೆ. ಆದರೆ ಈಗ ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿ ಕೇಳಲು ರಾಜ್ಯ ಸರ್ಕಾರ ಮುಂದೆ ಬರುತ್ತಿಲ್ಲ. ಈ ಸರ್ಕಾರಕ್ಕೆ ನಾಡಿನ ರೈತರ ಮೇಲೆ ಕಾಳಜಿ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.



