ಬೆಂಗಳೂರು: ಜನತೆಗಾಗಿ ತಾವು ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ತಮ್ಮ 93ನೇ ಹುಟ್ಟುಹಬ್ಬದ ನಿಮಿತ್ತ ತಮ್ಮ ಪದ್ಮನಾಭನಗರ ನಿವಾಸದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಜನರಿಗಾಗಿ ತಮ್ಮ ಜನಪ್ರಿಯ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ತಮ್ಮ ಹುಟ್ಟು ಹಬ್ಬಕ್ಕೆ ವಿಶೇಷವಾಗಿ ಸಂದೇಶವನ್ನು ಕಳುಹಿಸಿದ್ದಾರೆ. ಈ ತಿಂಗಳ 20ರಂದು ವಿಶೇಷ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿವರಗಳನ್ನು ತಿಳಿಸುತ್ತೇನೆ. ತಮ್ಮ ಹಾಗೂ ಎನ್ಡಿಎ ಬಾಂಧವ್ಯ ಸುಮಧುರವಾಗಿ ಮುಂದುವರಿಯುತ್ತದೆ. ಯಾವುದೇ ಲೋಪಗಳು ಎದುರಾಗದಂತೆ ಕಾರ್ಯನಿರ್ವಹಿಸುತ್ತೇವೆ. ಪಕ್ಷದಲ್ಲಿ ಏನಾದರೂ ಲೋಪದೋಷ ಎದುರಾದರೆ ಪರಸ್ಪರ ಚರ್ಚೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.



