ಚಂಡೀಗಢ: ಲೋಕಸಭಾ ಚುನಾವಣೆ ಹೊತ್ತಲ್ಲೇ ಹರಿಯಾಣದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕರ್ಣದಿಂದ ಕಣಕ್ಕಿಳಿಸಬಹುದು ಮತ್ತು ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು.
ಹರಿಯಾಣದಲ್ಲಿ ಬಿಜೆಪಿ-ಜನನಾಯಕ ಜನತಾ ಪಕ್ಷ (ಜೆಜೆಪಿ)ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಬಿಜೆಪಿ ಮತ್ತು ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ನಡುವಿನ ಸಂಬಂಧ ಹದಗೆಟ್ಟಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲಾ 10 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.
ಮೈತ್ರಿ ಮುರಿದು ಬಿದ್ದಿದೆ. ಆದರೆ ಎಂ.ಎಲ್.ಖಟ್ಟರ್ ಅವರನ್ನು ಬೆಂಬಲಿಸುವ ಕೆಲವು ಸ್ವತಂತ್ರ ಶಾಸಕರು ಸರ್ಕಾರದ ಅಸ್ತಿತ್ವವನ್ನು ಖಚಿತಪಡಿಸುತ್ತಾರೆ ಎಂದು ಸ್ವತಂತ್ರ ಶಾಸಕ ನಯನ್ ಪಾಲ್ ರಾವತ್ ಇಂದು ಹೇಳಿದ್ದಾರೆ.ಬಿಜೆಪಿ ಮತ್ತು ಜೆಜೆಪಿ (ಜನನಾಯಕ ಜನತಾ ಪಕ್ಷ) ಎರಡೂ ಪಕ್ಷಗಳ ವರಿಷ್ಠರು ಆಯಾ ಶಾಸಕರ ಪ್ರತ್ಯೇಕ ಸಭೆಗಳನ್ನು ಕರೆದಿದ್ದಾರೆ. ಅದಕ್ಕೂ ಮುನ್ನ ಖಟ್ಟರ್ ಅವರು ತಮ್ಮ ನಿವಾಸದಲ್ಲಿ ಬಿಜೆಪಿಯ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ವೀಕ್ಷಕರು ಕೇಂದ್ರ ಸಚಿವ ಅರ್ಜುನ್ ಮುಂಡಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹರಿಯಾಣಕ್ಕೆ ತೆರಳುತ್ತಿದ್ದು, ರಾಜ್ಯದ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ. ಚೌಟಾಲಾ ಅವರು ಮಾರ್ಚ್ 11 ರಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಸಿದರು.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಹತ್ತು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹರಿಯಾಣ ನಾಯಕತ್ವವು ತನ್ನ ಮಿತ್ರ ಪಕ್ಷ ಜೆಜೆಪಿಗೆ ಯಾವುದೇ ಸ್ಥಾನವನ್ನು ಬಿಟ್ಟುಕೊಡಲು ಒಲವು ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಎರಡು ಲೋಕಸಭಾ ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ಮೂಲಗಳು ತಿಳಿದುಬಂದಿದೆ.