ಹೈದರಾಬಾದ್: ದೆಹಲಿ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಕ್ಷ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಪೋಸ್ಟ್ ಮಾಡಿದ್ದಕ್ಕಾಗಿ ಮೆಟಾ ಇಂಡಿಯಾ ಮುಖ್ಯಸ್ಥರು ಸೇರಿದಂತೆ ಹಲವಾರು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿಭಟನೆ ನಡೆಯುವಾಗ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೋದಿಯವರ ಮಾರ್ಫ್ ಮಾಡಿದ ಮತ್ತು ಆಕ್ಷೇಪಾರ್ಹ AI ವಿಡಿಯೋಗಳು, ಫೋಟೋಗಳನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ ಆಕ್ರಮಣಕಾರಿ ಭಾಷೆ, ಅಪಹಾಸ್ಯ ಮತ್ತು ಅಸಭ್ಯ ಹೇಳಿಕೆಗಳನ್ನು ಬಳಸಲಾಗಿದೆ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿ, ಆಕ್ರಮಣಕಾರಿ ವರ್ತನೆಗೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ.



