This is the title of the web page
This is the title of the web page

ಯೋಗಿಗೆ ಬೆದರಿಕೆ ಕರೆ ಪ್ರಕರಣ ದಾಖಲು

ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

`ಡಯಲ್ 112′ ಸಂದೇಶದ ಮೂಲಕ ಬೆದರಿಕೆಯನ್ನು ಸ್ವೀಕರಿಸಲಾಗಿದೆ. ಅದರಲ್ಲಿ ವ್ಯಕ್ತಿ ‘ನಾನು ಸಿಎಂ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ’ ಎಂದು ಹೇಳಿದ್ದಾನೆ.

ಬೆದರಿಕೆ ಬಂದ ನಂತರ, ‘112’ ನ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ‘ಡಯಲ್ 112′ ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪಿಎಸ್ ಸುಶಾಂತ್..

ಗಾಲ್ಫ್ ಸಿಟಿಯಲ್ಲಿ 506 ಮತ್ತು 507 ಐಪಿಸಿ ಮತ್ತು 66 ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕರೆ ಮಾಡಿದ್ದ ರಿಹಾನ್ ಎನ್ನಲಾದ ವ್ಯಕ್ತಿಯನ್ನು ಬಂಧಿಸಿರುವುದಾಗಿಯೂ ತಿಳಿದುಬಂದಿದೆ.