ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಪೋಕ್ಸೊ ಸೇರಿದಂತೆ ಎರಡು ಎಫ್‍ಐಆರ್ ದಾಖಲಿಸಿದ್ದಾರೆ. ಆದರೂ ಕಳೆದ ಆರು ದಿನಗಳಿಂದ ಜಂತರ್ ಮಂಥರ್‍ನಲ್ಲಿ ನಡೆಸುತ್ತಿರುವ ಧರಣಿಯನ್ನು ಮುಂದುವರಿಸಲು ಕುಸ್ತಿಪಟುಗಳು ತೀರ್ಮಾನಿಸಿದ್ದಾರೆ.
‘ಬ್ರಿಜ್‍ಭೂಷಣ್ ವಿರುದ್ಧ ಶುಕ್ರವಾರ ಎಫ್‍ಐಆರ್ ದಾಖಲಿಸಲಾಗುವುದು’ ಎಂದು ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿದರು. ಅದರ ಬೆನ್ನಲ್ಲೇ ಎಫ್‍ಐಆರ್ ದಾಖಲಾಗಿದೆ.
Leave a Review