ಶಿವಮೊಗ್ಗ: ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಜಿಲ್ಲಾ ಎನ್ಎಸ್ವಿ ದೂರು ನೀಡಿದ್ದು, ಸಿಆರ್ಪಿಸಿ ಕಲಂ 157 ಅಡಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್ಎಸ್ವಿ ಸದಸ್ಯರು ದೂರು ನೀಡಿದ್ದಾರೆ.