ಬೆಂಗಳೂರು: ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಐಪಿಎಲ್ ಟಿಕೆಟ್ ಮಾರಾಟ ಮಾಡಿದ ಆರೋಪದಲ್ಲಿ ಕೆಎಸ್ಸಿಎ ಸದಸ್ಯ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿಸಿಬಿ ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ದುಪ್ಪಟ್ಟು ಹಣಕ್ಕೆ ಟಿಕೆಟ್ ಮಾರುತ್ತಿದ್ದ ಸಿಬ್ಬಂದಿ ಸಿಕ್ಕಿಬಿದ್ದಿದ್ದಾನೆ. ಬ್ಲಾಕ್ನಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ ಚಿನ್ನಸ್ವಾಮಿ ಸ್ಟೇಡಿಯಂನ ಲಕ್ಷಿ÷್ಮ ಕ್ಯಾಟರ್ಸ್ ಕ್ಯಾಪ್ಟನ್ ಚಂದ್ರಶೇಖರ್ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.



