ಅಮರಾವತಿ: ವಿಶಾಖಪಟ್ಟಣಂನ ಬಂದರಿನಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 40 ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮವಾಗಿವೆ.
ಘಟನೆಯಲ್ಲಿ ಸುಮಾರು 30 ಕೋಟಿ ರೂ. ನಷ್ಟವಾಗಿದೆ. ಕೆಲವು ಕಿಡಿಗೇಡಿಗಳು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೀನುಗಾರರು ಶಂಕಿಸಿದ್ದಾರೆ.
ಘಟನೆಯ ಬಳಿಕ ಅಗ್ನಿಶಾಮಕ ದಳ ಬೆಂಕಿ ಆರಿಸಲು ಹರಸಾಹಸ ಪಟ್ಟರು. ಕೆಲವು ದೋಣಿಗಳಲ್ಲಿ ಸಿಲಿಂಡರ್, ಇಂಧನ ಟ್ಯಾಂಕ್ಗಳಿಗೆ ಬೆಂಕಿ ತಗುಲಿದ್ದರಿಂದ….
ಅವಘಡ ಸಂಭವಿಸಿದ್ದು, ಪ್ರದೇಶದ ಜನರು ಘಟನೆಯಿಂದ ಭೀತಿಗೊಂಡರು. ರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆನಂದ್ ರೆಡ್ಡಿ ತಿಳಿಸಿದ್ದಾರೆ.