ಭರೂಚ್: ಗುಜರಾತ್ನ ಭರೂಚ್ಜಿಲ್ಲೆಯಲ್ಲಿರುವಕಾರ್ಖಾನೆಯೊಂದರಲ್ಲಿ ಭಾರಿಅಗ್ನಿಅವಘಡ ಸಂಭವಿಸಿದೆ.
ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿಆರ್ಗಾನಿಕ್ಸ್ ಪ್ಪ್ರೈವೇಟ್ ಲಿಮಿಟೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ಆವರಿಸಿದೆ.ದೂರದಿಂದಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಗೋಚರಿಸುತ್ತಿದ್ದು, ಕೈಗಾರಿಕಾ ಪ್ರದೇಶದಲ್ಲಿ ಭೀತಿ ಸೃಷ್ಟಿಯಾಗಿದೆ.ಸ್ಥಳಕ್ಕೆ ಹಲವಾರುಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.