ಬೆಂಗಳೂರು: ನಗರದ ಖಾಸಗಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯು ಸಾರ್ವಜನಿಕರಲ್ಲಿ ಮತ್ತು ಪೋಷಕರಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಜ್ಞಾನಭಾರತಿ ಸಮೀಪದ ವಿಶ್ವೇಶ್ವರಯ್ಯ ಲೇಔಟ್ನಲ್ಲಿರುವ ಪ್ರಖ್ಯಾತ `ಕೌಶಲ್ಯ ಶಾಲೆ’ಯಲ್ಲಿ ಈ
ಅವಘಡ ಸಂಭವಿಸಿದೆ. ಶಾಲಾ ಕಟ್ಟಡದ ಐದನೇ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ
ನೋಡುತ್ತಿದ್ದಂತೆ ಇಡೀ ಮಹಡಿಗೆ ವ್ಯಾಪಿಸಿದೆ.
ಖಾಸಗಿ ಶಾಲೆಯಲ್ಲಿ ಅಗ್ನಿ ದುರಂತ



