ನವದೆಹಲಿ: ದೇಶದ 102 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಗ್ಗೆ ಆರಂಭವಾಗಿದೆ. 1,600ಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಗಳಲ್ಲಿ ಭದ್ರವಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಹಾಗೂ ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿ ಸೇರಿದಂತೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ.
8.4 ಕೋಟಿ ಪುರುಷರು ಮತ್ತು 8.23 ಕೋಟಿ ಮಹಿಳೆಯರು ಸೇರಿದಂತೆ 16.63 ಕೋಟಿ ಮತದಾರರು 1.87 ಲಕ್ಷ ಮತಗಟ್ಟೆಗಳಲ್ಲಿ ಇಂದು ಮತದಾನ ಮಾಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು,
ಈ ಕ್ಷೇತ್ರಗಳಲ್ಲಿನ ಅರ್ಹರೆಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಕರೆ ನೀಡುತ್ತೇನೆ. ಇದಾದ ನಂತರ, ಪ್ರತಿ ಮತವು ಎಣಿಕೆಯಾಗುತ್ತದೆ ಮತ್ತು ಪ್ರತಿ ಧ್ವನಿಯು ಮುಖ್ಯವಾಗಿದೆ! ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.