ಕೆಂಗೇರಿ: ಕ್ಷೇತ್ರದ ಗ್ರಾಮೀಣ ಭಾಗದ ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.
ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಣಪತಿಹಳ್ಳಿ ತಾವರೆಕೆರೆ ಹಾಗು ದೊಡ್ಡಾಲದಮರ ಮುಖ್ಯರಸ್ತೆಯ ಹೆದ್ದಾರಿಗೆ ಕಾಂಕ್ರೀಟ್ ರಸ್ತೆಯನ್ನಾಗಿ ರೂಪಿಸಿರುವ ಹಿನ್ನಲೆಯಲ್ಲಿ ಎಸ್ ಟಿ ಸೋಮಶೇಖರ್ ಅವರು ನಾಗರೀಕರಿಗೆ ಮುಕ್ತಗೊಳಿಸಿ ಮಾತನಾಡಿದ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹದಿನ್ಯೂಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿ ಪರಿವರ್ತಿಸಿ ನಾಗರೀಕರಿಗೆ ಆಗಬಹುದಾದ ತೊಂದರೆಗಳನ್ನು ತಪ್ಪಿಸಲು ಈ ರೀತಿಯ ಸಂಪರ್ಕ ರಸ್ತೆಗಳಿಗೆ ಕಾಂಕ್ರೀಟ್ ರಸ್ತೆಗಳನ್ನು ಮಾಡಿ ನಾಗರೀಕರಿಗೆ ಅನುಕೂಲವಾಗುವಂತೆ ಮಾಡಲು ಚಾಲನೆ ನೀಡಲಾಗಿದೆ.
ಯಾಕೆಂದರೆ ಗಣಪತಿಹಳ್ಳಿಯ ಮುಖಾಂತರ ತಾವರೆಕೆರೆಗೆ ಹೋಗಲು ರಸ್ತೆ ಸರಿಯಾಗಿರಲಿಲ್ಲ ಅದನ್ನು ಅರಿತು ದೊಡ್ಡಾಲದಮರದ ರಸ್ತೆಯಿಂದ ತಾವರೆಕೆರೆ ಗ್ರಾಮಕ್ಕೆ ಸಂಪೂರ್ಣ ಕಲ್ಪಿಸುವ ದೃಷ್ಟಿಯಿಂದ ಕಾಂಕ್ರೀಟ್ ರಸ್ತೆಯನ್ನು ಮಾಡಿ ಅಭಿವೃದ್ಧಿ ನಾಗರೀಕರಿಗೆ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದರು.
ಅದರಂತೆ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಅದ್ಯತೆಮೇರೆಗೆ ಡಾಂಬರೀಕರಣ ಶಿಕ್ಷಣ ಪಶುವೈದ್ಯ ಶಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ನಾಗರೀಕ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅದರ್ಶ ಗ್ರಾಮಗಳನ್ನಾಗಿ ಪರಿವರ್ತಿಸುವ ಮೂಲಕ ಮಾದರಿ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚುಂಚನಕುಪ್ಪೆ ಗ್ರಾಮ ಪಂಚಾಯತಿ ಅದ್ಯಕ್ಷರಾದ ರಾಮುಗೌಡ ಮುಖಂಡರಾದ ರೇವಣ್ಣಸಿದ್ದಯ್ಯ ಗಂಗರೇವಣ್ಣ ಬಸವರಾಜು ಪ್ರಸನ್ನರುದ್ರ ಸುಕುಮಾರ್ ನಾರಾಯಣ್ ರಾಮೋಹಳ್ಳಿ ಗ್ರಾಮ ಪಂಚಾಯತಿ ಮುಖಂಡ ಚೇತನ್ ಗುತ್ತಿಗೆದಾರರು ಹಾಗು ಮುಖಂಡರಾದ ಶ್ರೀ ಎಸ್ ಟಿ ರಮೇಶ್ ಹಾಗು ಚುಂಚನಕುಪ್ಪೆ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.