ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ಪ್ರಥಮ PUC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ರಾಜ್ಯಾದ್ಯಂತ ಏಕಕಾಲಕ್ಕೆ ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ 27 ರವರೆಗೆ ನಡೆಸಿದೆ.
ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸಿದ್ದರು. ಈ ಪರೀಕ್ಷೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶವನ್ನು ಈ ಬಾರಿ ಬೇಗನೇ ಪ್ರಕಟಿಸಲು ಮಂಡಳಿ ಮುಂದಾಗಿದೆ. ಹೀಗಾಗಿ ಇಂದು ಅಧಿಕೃತ PUC ವೆಬ್ಸೈಟ್: karresults.nic.in ನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ.