ಸುಧೀAದ್ರ ವೆಂಕಟೇಶ್ ನಿರ್ಮಿಸಿ ಪವನ್ ವೆಂಕಟೇಶ್ ನಿರ್ದೇಶಿಸಿರುವ “ಫಸ್ಟ್ ಸ್ಯಾಲರಿ” ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಕರೋನ ಸಮಯದಲ್ಲಿ ” ಕರಾಳ ರೋಗ ನಾಶ” ಕಿರುಚಿತ್ರ ನಿರ್ದೇಶನ ಮಾಡಿ ಅನುಭವ ಹೊಂದಿರುವ ಪವನ್ ವೆಂಕಟೇಶ್, ಈಗ `ಫಸ್ಟ್ ಸ್ಯಾಲರಿ’ ಎಂಬ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ. ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್,ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ
ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್ನಲ್ಲೇ ಈ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ನೋಡುಗರಿಗೆ ಬೇಕಾದ ಎಲ್ಲಾ ಕಮರ್ಷಿಯಲ್ ಅಂಶ ಇದೆ. ಇದು ತಾಯಿಯ ಸೆಂಟಿಮೆAಟ್ ಆಧರಿಸಿದ ಕಿರುಚಿತ್ರ. ಐದು ದಿನಗಳ ಕಾಲ ಬೆಂಗಳೂರಿನಲ್ಲಿ
ಚಿತ್ರೀಕರಣ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಕಡಿಮೆ ಒಂದು ತಿಂಗಳು ಆಗಿದೆ. ಕಿರುಚಿತ್ರದಲ್ಲಿ ೧ ಹಾಡಿದೆ, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ ಮೂರು ತಿಂಗಳು ಹಿಡಿದಿದೆ. `ಫಸ್ಟ್ ಸ್ಯಾಲರಿ’ ಕಿರುಚಿತ್ರ ಒಟ್ಟಾರೆ ೨೪ ನಿಮಿಷದ ಅವಧಿ ಇದೆ. ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್. ಎನ್. ರವಿ ಸಾಸನೂರು ಕೆಲಸ ಮಾಡಿದ್ದಾರೆ.ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣ ಹಾಗೂ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ.



