ಬೆಂಗಳೂರು: ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆಗೈದಿರುವ ಸಿನಿಮೀಯ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಕಳೆದ ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ `ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮೀ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ.
ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಹಾಗೂ ಯೋಹಾನ್ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಚೇತನ್ ಎಂಬಾತ ವಿಜಯಲಕ್ಷ್ಮೀ ಎಂಬುವರ ಪರಿಚಯ ಹೊಂದಿದ್ದ ಹಾಗೂ ಅವರ ಬಳಿ ಸಾಲ ಪಡೆದಿದ್ದು, ಆಕೆಯ ಬಳಿ ಹೆಚ್ಚಿನ ಹಣ ಮತ್ತು ಚಿನ್ನಾಭರಣ ಇದೆ ಎಂದು ತಿಳಿದಿದ್ದ ಚೇತನ್, ಸ್ನೇಹಿತರೊಂದಿಗೆ ಸೇರಿ ಕಳ್ಳತನಕ್ಕೆ ಸಂಚು ರೂಪಿಸಿದ್ದನು.ಅದರಂತೆ ಏಪ್ರಿಲ್ 21ರಂದು ವಿಜಯಲಕ್ಞ್ಮೀ ಅವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ರಾಕೇಶ್ ಎಂಬಾತ ಬೈಕ್ನಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಅಲ್ಲಿಗೆ ಆಟೋದಲ್ಲಿ ಬಂದ ಇತರ ಆರೋಪಿಗಳು ವಿಜಯಲಕ್ಷಿ÷್ಮ ಅವರನ್ನು ಆಸ್ಪತ್ರೆಗೆ ಸೇರಿಸುವ ನಾಟಕವಾಡಿದ್ದಾರೆ.



