ಲಕ್ನೋ: ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ನಿಯಂತ್ರಣ ತಪ್ಪಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ.
ಮೃತರು ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಇದು ಬಸ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಅಪಘಾತದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.
ಮಥುರಾದ ಮಹಾವಾನ್ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ 40 ಜನರಿದ್ದ ಸ್ಲೀಪರ್ ಕೋಚ್ ಬಸ್ ಕಾರಿಗೆ ಡಿಕ್ಕಿ ಹೊಡೆದಿತ್ತು. ಪೊಲೀಸರ ಪ್ರಕಾರ, ಬಸ್ ಬಿಹಾರದಿಂದ ದೆಹಲಿ ಕಡೆಗೆ ಚಲಿಸುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಕಾರಿನೊಳಗೆ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ.ವರದಿಗಳ ಪ್ರಕಾರ ಕಾರಿನಲ್ಲಿದ್ದವರು ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದರು. ಮಥುರಾದ ಎಕ್ಸ್ಪ್ರೆಸ್ವೇಯಲ್ಲಿ ಕಾರೊಂದರ ಮುಂದೆ ಬಸ್ ಚಲಿಸುತ್ತಿದ್ದು, ಅದರ ಟೈರ್ ಪಂಕ್ಚರ್ ಆಗಿದೆ. ಇದರಿಂದ ನಿಯಂತ್ರಣ ತಪ್ಪಿದ ಕಾರು ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ನಂತರ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದವರು ಸಕಾಲದಲ್ಲಿ ಹೊರಬರಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.