ದೊಡ್ಡಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ನಿರ್ಭಯವಾಗಿ ಮತ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಯನ್ನು ಮಾಡುವುದು ನಮ್ಮೇಲ್ಲರ ಕರ್ತವ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಕರೆ ನೀಡಿದರು.
ತಾಲ್ಲೂಕಿನ ಎಸ್ ಎಸ್ ಘಾಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತಿ ಹಾಗೂ ತಾಲೂಕು ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನದ ಅರಿವು ಕಾರ್ಯ ಕ್ರಮದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಯಾವುದೇ ರೀತಿಯ ಆಸೆ ಆಮಿಷಗಳಿಗೆ ಒಳಗಾಗದೆ ಮತಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಸಾಧಿಸಬೇಕು ಎಂದರು.
ನಂತರ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ.ಎಂ.ತಿರ್ಲಾಪುರ ಅವರು ಎಲ್ಲಾ ಮತದಾರರು ಯಾವುದೇ ರೀತಿಯ ಜಾತಿ,ಮತ, ಧರ್ಮ ಹಾಗೂ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಚಲಾಯಿಸಬೇಕೆಂದು ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದರು.
ಈ ಕಾರ್ಯ ಕ್ರಮದಲ್ಲಿ ಉಪಕಾರ್ಯದರ್ಶಿ ನಾಗರಾಜ್, ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥಗೌಡ,ಜಿಲ್ಲಾ ಹಾಗೂ ತಾಲ್ಲೂಕು ಸಿಬ್ಬಂದಿ ವರ್ಗದವರು, ಗ್ರಾ.ಪಂ.ಸಿಬ್ಬಂದಿ, ನರೇಗಾ ಸಿಬ್ಬಂದಿ, ಎನ್.ಆರ್.ಎಂ.ಎಲ್ ಸಿಬ್ಬಂದಿ, ಮಹಿಳಾ ಸ್ವಸಹಾಯ ಗುಂಪುಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
Leave a Review