ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಿಂದ ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ಸೋಮವಾರ ಮಂಗಳವಾರ ಅವರು ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಪ್ರಚಾರ ನಡೆಸಲಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಮರ್ನಾಲ್ಕು ಸ್ಥಳಗಳಲ್ಲಿ ಪ್ರಚಾರ ನಡೆಸುವ ಮುಖ್ಯಮಂತ್ರಿ ಅಂದು ರಾತ್ರಿ ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರವು ಸಹ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಅವರು ಅಂದು ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಚುನಾವಣೆ ಎದುರಾಗಿ ಮುಖ್ಯ ಮಂತ್ರಿಯವರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದರಿಂದ ಏ.3ರಂದು ಮಧುಗಿರಿ ವಿಧಾನಸಭಾ ಕ್ಷೇತ್ರಕ್ಕೆ ನೀಡುವ ಭೇಟಿಯನ್ನು ಮುಂದೂಡಲಾಗಿದೆ. ಏ.3ರಂದು ಮುಖ್ಯಮಂತ್ರಿ ಮಧುಗಿರಿಗೆ ಭೇಟಿ ನೀಡಬೇಕಾಗಿತ್ತು. ಚುನಾವಣಾ ಕಾರ್ಯದಿಂದಾಗಿ ಅವರ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.



