ಬೆಂಗಳೂರು: ತಾಯಂದಿರು ನಮ್ಮ ಧರ್ಮ, ಆಚಾರ ವಿಚಾರವನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ದೊಡ್ಡವರು ಪಾಲನೆ ಮಾಡಿದಾಗ ಮಾತ್ರ ಮಕ್ಕಳು ಅನುಕರಣೆ ಮಾಡುತ್ತಾರೆ. ತಾಯಂದಿರು ಮಕ್ಕಳಿಗೆ ಸಂಸ್ಕಾರ ಶಿಕ್ಷಣ ನೀಡಿದಾಗ ಸನಾತನ ಧರ್ಮ ಉಳಿಯುತ್ತದೆ ಎಂದು ಆನೇಕಲ್ ತಾಲೂಕು ರಾಜಾಪುರ ಸಂಸ್ಥಾನ ಮಠದ ಡಾ. ಪಟ್ಟದ ರಾಜೇಶ್ಬರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.ಅವರು ಭಾನುವಾರ ಬೆಂಗಳೂರಿನ ಹೆಬ್ಬಗೋಡಿಯ ಉತ್ತರ ಕರ್ನಾಟಕ ಬಸವ ಸಮಿತಿ ಏರ್ಪಡಿಸಿದ್ದ ಜಗದ್ಗುರು ರೇಣುಕಾದಿ ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದ ಧಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಒಂದು ಕುಟುಂಬದ ಎಲ್ಲರೂ ಸೇರುವುದೇ ಕಷ್ಟ ಇಂತಹ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಜನರು ಬಂದು ಸಂಘಟನೆ ಮಾಡಿಕೊಂಡು ಬಸವ ಜಯಂತಿ ಆಚರಿಸುತ್ತಿರುವುದು ಶ್ಲಾಘನೀಯ. ತಾಯಂದಿರು ನಮ್ಮ ಧರ್ಮ, ಆಚಾರ ವಿಚಾರವನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ದೊಡ್ಡವರು ಪಾಲನೆ ಮಾಡಿದಾಗ ಮಾತ್ರ ಮಕ್ಕಳು ಅನುಕರಣೆ ಮಾಡುತ್ತಾರೆ. ತಾಯಂದಿರು ಮಕ್ಕಳಿಗೆ ಸಂಸ್ಕಾರ ಶಿಕ್ಷಣ ನೀಡಿದಾಗ ಸನಾತನ ಧರ್ಮ ಉಳಿಯುತ್ತದೆ ಎಂದರು. ಎಲ್ಲರೂ ಕಾಯಕ ವರ್ಗದವರಿದ್ದೀರಿ, ನಿಮ್ಮ ಆರೋಗ್ಯವೂ ಬಹಳ ಮುಖ್ಯವಾಗಿದೆ. ನಿಮ್ಮ ಮಕ್ಕಳು ಒಳ್ಳೆಯ ಸಂಸ್ಕಾರವAತರಾಗಿ ಬೆಳೆಯಬೇಕು. ಪ್ರತಿವರ್ಷ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಹೇಳಿದರು.ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಬಸವಣ್ಣನವರು ಸಮಾಜದಲ್ಲಿ ಸಮಾನತೆ ತರಲು 12ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪನೆ ಮಾಡಿದ್ದರು ಎಂದು ಹೇಳಿದ್ದಾರೆ ಬಸವಣ್ಣ ಹನ್ನೆರಡನೇ ಶತಮಾನದಲ್ಲಿಯೇ ಸಮಾಜದಲ್ಲಿನ ಮೇಲು ಕೀಳು ಎಂಬ ಭಾವನೆ ತೊಡೆದು ಹಾಕಿ, ಜಾತಿ ಭೇದ ಹೋಗಲಾಡಿಸಲು ಕ್ರಾಂತಿ ಮಾಡಿದರು. ಪ್ರಸ್ತುತ ಸಮಾಜದಲ್ಲಿ ಕಾಯಕ ವರ್ಗ, ತುಳಿತಕ್ಕೊಳಗಾದವರಿಗೆ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಆಳುವ ಸರ್ಕಾರಗಳು ಈ ವರ್ಗಗಳಿಗೆ ಶಿಕ್ಷಣ, ಆರೋಗ್ಯ ನೀಡುವ ಕೆಲಸ ಮಾಡಬೇಕು ಎಂದರು.ಉತ್ತರ ಕರ್ನಾಟಕ ಭಾಗದಿಂದ ಜನರು ಬೆಂಗಳೂರಿಗೆ ಆಗಮಿಸಿ ಈ ಭಾಗದಲ್ಲಿ ಬಸವ ತತ್ವ ಪ್ರಸಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯ ನಿರಂತರವಾಗಿ ಮುಂದುವರೆಯಲಿ ಎಂದು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ನೂರಾರು ಮುತೈದೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಹೆಬ್ಬಗೋಡಿ ನಗರಸಭೆ ಅಧ್ಯಕ್ಷೆ ಸುಜಾತ ಹರೀಶ, ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷರಾದ ಶಿವಕುಮಾರ ಮೇಟಿ, ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಉಪಾಧ್ಯಕ್ಷ ಬಸವರಾಜ ಬೀಳೂರು, ನಿರ್ದೇಶಕರಾದ ರಮೇಶ ಸಿದ್ದಾಪುರು, ಹೃದ್ರೋಹವತಜ್ಞ ಡಾ. ದಯಾನಂದ ಯಲಿಗಾರ ಸೇರಿದಂತೆ ಅನೇಕರು ಹಾಜರಿದ್ದರು.



