ಬೆಂಗಳೂರು: ಟೆಲಿಗ್ರಾಂ ಮತ್ತು ವಾಟ್ಸಪ್ ಮೂಲಕ ಆನ್ಲೈನ್ನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ವಿದೇಶಿ ಮಹಿಳೆಯರನ್ನು ತೊಡಗಿಸಿಕೊಂಡಿದ್ದ, ವಿದೇಶಿ ಮೂಲದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲಸೂರು ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ರವರಿಗೆ ದೊಮ್ಮಲೂರಿನಲ್ಲಿ ಕಾನೂನುಬಾಹಿರವಾಗಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ನಾಲ್ಕು ಜನರನ್ನು ವಶಕ್ಕೆ ಪಡೆದು ಮುಂದಿನ ತನಿಖೆಯನ್ನು ನಡೆಸಲಾಗಿ ಬ್ಯಾಂಗಲೋರ್ ಡೇಟಿಂಗ್ ಕ್ಲಬ್ ಎಂಬ ಟೆಲಿಗ್ರಾಂ ಗ್ರೂಪ್ ಮೂಲಕ ವೇಶ್ಯಾವಾಟಿಕೆ ನಡೆಸುತ್ತಿರುವುದು ತನಿಕೆಯಿಂದ ಬೆಳಕಿಗೆ ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಶಕ್ಕೆ ಪಡೆದ ಆರೋಪಿತೆ ವ್ಯಾಪಕ ವೇಶ್ಯಾವಾಟಿಕೆ ಜಾಲವನ್ನು ಹೊಂದಿದ್ದು ಹೀಗೆಯೂ ಕರ್ನಾಟಕದಲ್ಲಿ ಮದುವೆಯಾಗಿ ಸುಮಾರು 15 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿರುತ್ತಾರೆಂದು ಎಂದು ವಿವರ ನೀಡಿದ್ದಾರೆ.ಈಕೆಯು ಬೆಂಗಳೂರು ಜೈಪುರ ಚೆನ್ನೈ, ಮೈಸೂರ್ ದೆಹಲಿ ಉದಯಪುರ ಮುಂಬೈ ಮುಂತಾದ ಕಡೆಗಳಲ್ಲಿ ವೇಶ್ಯಾವಾಟಿಕೆ ಜಾಲದ ಏಜೆಂಟ್ ಗಳ ಮೂಲಕ ಸಂಪರ್ಕದಲ್ಲಿದ್ದುಕೊಂಡು ವಿದೇಶಿ ಮಹಿಳೆಯರನ್ನು ಸಹ ವೇಶ್ಯಾವಾಟಿಕೆ ದಂಧೆತೊಡಗಿಸಿಕೊಂಡಿರುವ ಬಗ್ಗೆ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.ಪೂರ್ವ ವಿಭಾಗದ ಡಿಸಿಪಿ ದೇವರಾಜು ಅವರ ನೇತೃತ್ವದಲ್ಲಿ ಪ್ರಕರಣವನ್ನು ಭೇದಿಸಲಾಗಿದೆ.