ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಜಿಲ್ಲಾ ಕೇಂದ್ರದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದರು.
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆಗೆ ಸಿ.ಎಂ.ಲಿಂಗಪ್ಪರವರು ಮಹಿಳೆಯರ ಉಚಿತ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿಸಿದರು.
ಈ ವೇಳೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿ.ಎಂ.ಲಿಂಗಪ್ಪ , ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಚಾರಿತ್ರಿಕವಾಗಿದೆ.
ಐದು ಯೋಜನೆಗಳ ಪೈಕಿ ಶಕ್ತಿ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಮಹಿಳೆಯರು ಎಸಿಯಂತಹ ಐಷಾರಾಮಿ ಸಾರಿಗೆ ಬಸ್ ಗಳನ್ನು ಹೊರತು ಪಡಿಸಿ, ಉಳಿದ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದ್ದು, ಈ ಯೋಜನೆಯು ಕ್ರಾಂತಿಕಾರಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತರಲಿದ್ದ ಗ್ಯಾರಂಟಿಗಳಿಗೆ ರಾಜ್ಯದ ಜನತೆಯಿಂದ ಉತ್ತಮ ಸ್ಪಂದನೆ ದೊರಕಿತು. ಈ ಯೋಜನೆಗಳಿಗೆ ಬಹುಸಂಖ್ಯಾತ ಮಹಿಳೆಯರು ಸ್ಪಂದನೆ ನೀಡಿದ್ದರು. ಭರವಸೆ ಈಡೇರಿಸುವ ನಿಟ್ಟಿನಲ್ಲಿ ಯೋಜನೆ ಜಾರಿಗೆ ಸರ್ಕಾರ ಮುಂದಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಹೆಂಗಸರು ಮಾತ್ರ ಮತ ಹಾಕಿದ್ದಾ, ಗಂಡಸರು ಮತ ಹಾಕಿಲ್ವ ಎಂದು ಕೆಲ ಪುರುಷರು ಪ್ರಶ್ನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಅದರ ಟಿಕೆಟ್ ದರ ಉಳಿಸಿದ್ದು, ಪುರುಷರಿಗೂ ಯೋಜನೆ ಲಾಭ ಸಿಕ್ಕಿದಂತಲ್ಲವೇ ಎಂದು ತಿಳಿಸಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದವರು ಮತ್ತು ನೀಡದವರಿಗೂ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಯೋಜನೆಗಳ ಆರ್ಥಿಕ ಸಾಧಕ ಮತ್ತು ಬಾಧಕಗಳನ್ನು ಸರ್ಕಾರ ನೋಡಿಕೊಳ್ಳುತ್ತದೆ. ಬಾಕಿ ಉಳಿದಿರುವ ಯೋಜನೆಗಳನ್ನು ಕ್ರಮೇಣ ಜಾರಿಗೆ ತರಲಿದೆ ಎಂದು ಲಿಂಗಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ರಾಜು, ನಗರಸಭೆ ಅಧ್ಯಕ್ಷೆ ಪವಿತ್ರಾ, ಉಪಾಧ್ಯಕ್ಷ ಸೋಮಶೇಖರ್ (ಮಣಿ), ಸದಸ್ಯ ಕೆ.ಶೇಷಾದ್ರಿ , ಕೆಎಂಎ? ಮಾಜಿ ಅಧ್ಯಕ್ಷ ಬಿ.ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷ ಪಾರ್ವತಮ್ಮ, ಜಿಲ್ಲಾಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೆÇಲೀಸ್ ವರಿಷ್ಠಾಕಾರಿ ಕಾರ್ತಿಕ್ ರೆಡ್ಡಿ, ಕೆಎಸ್ ಆರ್ ಟಿಸಿ ವಿಭಾಗೀಯ ಮಟ್ಟದ ಅಕಾರಿ ಜಗದೀಶ್, ಡಿಟಿಒ ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.
Leave a Review