ಬಳ್ಳಾರಿ: ಜನವರಿ ೧ರಂದು ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬAಧಪಟ್ಟAತೆ ಪ್ರಮುಖ ಆರೋಪಿಯಾಗಿರುವ ಶಾಸಕ ನಾ.ರಾ. ಭರತ್ರೆಡ್ಡಿಯನ್ನು ಬಂಧಿಸುವAತೆ ಮಾಜಿ ಸಚಿವ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಆಗ್ರಹಪಡಿಸಿದ್ದಾರೆ.
ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಿರುವ ಪ್ರತಿಭಟನಾ ಸಮಾವೇಶ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದು ೧೬ ದಿವಸಗಳಾದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.
ಒಬ್ಬ ವ್ಯಕ್ತಿಯನ್ನು ಕೊಲ್ಲುವ ಅಧಿಕಾರ ಯಾರು ಕೊಟ್ಟಿದ್ದಾರೆ ಎಂದು ಕಿಡಿಕಾರಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಸಮಾವೇಶವನ್ನು ಮಾಡುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ನಾಲ್ಕು ಕಡೆ ಸಮಾವೇಶವನ್ನು ಮಾಡುತ್ತಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಘಟನೆಯ ಖಂಡಿಸಿ ಬಳ್ಳಾರಿಯಿಂದ ಬೆಂಗಳೂರು ವರೆಗೂ ಬಿಜೆಪಿಯಿಂದ ಮಾಡಬೇಕು ಎಂದಿರುವ ಪಾದಯಾತ್ರೆಗೆ ಇದುವೆರೆಗೂ ಅನುಮತಿ ದೊರೆತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಭರತ್ರೆಡ್ಡಿಯನ್ನು ಬಂಧಿಸಿ ಬ್ಯಾನರ್ ಪ್ರಕರಣ: ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹ



