ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ಅದಕ್ಕೂ ಮುನ್ನ ನಮ್ಮ ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ನನ್ನ ಜನ್ಮಭೂಮಿಯೂ ಹೌದು, ಕರ್ಮಭೂಮಿಯೂ ಹೌದು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನರ ಮನೆ ಮಗನಾಗಿ, ಈ ಭಾಗದ ಜನಸೇವಕನಾಗಿ ಕೆಲಸ ಮಾಡಲು ನನಗೆ ಶಕ್ತಿ ನೀಡುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದೇನೆ.
ನಮ್ಮೆಲ್ಲರ ನೆಚ್ಚಿನ ನಾಯಕರಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಲಿ, ವಿಕಸಿತ ಭಾರತ ನಿರ್ಮಾಣ ಮಾಡುವ ಧೃಢ ಸಂಕಲ್ಪದೊಂದಿಗೆ ಭಾರತವನ್ನ ಮುನ್ನಡೆಸುತ್ತಿರುವ ಮೋದಿ ಅವರ ಕೈ ಇನ್ನಷ್ಟು ಬಲಗೊಳ್ಳಲಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನತೆಯ ಪರವಾಗಿ ಪ್ರಾರ್ಥನೆ ಸಲ್ಲಿಸಿದೆ.