ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ನಗರದ ಶ್ರೀ ಭೈರವಗಿರಿ ಕನ್ವೆನ್ಷನ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಗಮ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿಗಮ ಇವರ ಸಹಯೋಗದಲ್ಲಿ ಇಂದು ನಡೆದ,
ಬೆಂಗಳೂರು ನಗರ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶಾಸಕರಾದ ಕೆ.ಗೋಪಾಲಯ್ಯನವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಅಧ್ಯಕ್ಷರಾದ ಹೆಚ್.ಡಿ.ನಾಗೇಶ್, ಚಾಮರಾಜು, ವೆಂಕಟೇಶ್, ಮೂರ್ತಿಗೌಡ, ಕೇಶವ್, ಶಿವರಾಮು, ಡಾ.ನಾಗೇಂದ್ರ, ಚನ್ನಪ್ಪ ಸೇರಿದಂತೆ ನಿಗಮದ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.