ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ರೈಲು ಹಳಿ ದಾಟುವಾಗ ರೈಲು ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮೃತರು ಕಾರ್ತಿಕ ಪೂರ್ಣಿಮೆಯಂದು ಗಂಗಾ ಸ್ನಾನಕ್ಕೆ ಹೋಗುತ್ತಿದ್ದ ಭಕ್ತರಾಗಿದ್ದು, ಘಟನೆಯ ಸಮಯದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಬೆಳಗ್ಗೆ ೯:೩೦ ಕ್ಕೆ ನೇತಾಜಿ ಎಕ್ಸ್ಪ್ರೆಸ್ (೧೨೩೧೧) ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಪ್ಲಾಟ್ಫಾರ್ಮ್ ಬದಿಗೆ ಬದಲಾಗಿ ರೈಲಿನ ಎದುರು ಭಾಗದಲ್ಲಿ ಇಳಿದಿದ್ದಾರೆ, ಅಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತ ಘಟನೆಯನ್ನು ಅರ್ಥಮಾಡಿಕೊಂಡ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯ ವಿಪತ್ತು ನಿರ್ವಹಣಾ ಪಡೆ (Sಆಖಈ) ಮತ್ತು ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆ ತಂಡಗಳಿಗೆ ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಾ ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.



