ಬೆಂಗಳೂರು: ರಸ್ತೆ ನಡುವಿನ ಜಾಹೀರಾತು ಫಲಕಕ್ಕೆ ಕಾರು ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯ ಪುಟ್ಟೇನಹಳ್ಳಿ ಬಳಿ ನಡೆದಿದೆ. ರಸ್ತೆ ವಿಭಜಕದಲ್ಲಿದ್ದ ನಾಮಫಲಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ದೊಡ್ಡಬಳ್ಳಾಪುರ ಕಡೆಯಿಂದ ತೆರಳುತ್ತಿದ್ದ ಸ್ಕೋಡಾ ಕಾರು ಡಿವೈಡರ್ನಲ್ಲಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿಯಾಗಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು ದಾಖಲಿಸಿದ್ದಾರೆ.
ಅಪಘಾತ ಹಿನ್ನೆಲೆಯಲ್ಲಿ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರೇನ್ ಮೂಲಕ ಕಾರನ್ನು ತೆರವು ಮಾಡಿದರು.