ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಸಂಭವಿಸಿದೆ.
22ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು.
ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ.ಮೃತರು ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಾಹವೀರ ಅಲ್ಪಾಸಂಖ್ಯಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು.