ಮೈಸೂರು: ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹುಂಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಲ್ಕು ವಿಧ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಮೈಸೂರಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಹುಂಡಿ ಗ್ರಾಮದ ಬಳಿ ಇರುವ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕರು ನಾಪತ್ತೆಯಾಗಿದ್ದಾರೆ. ಇದಕ್ಕೆ ಕಾರಣ ತಿಳಿದುಬಂದಿಲ್ಲ.
ನಾಪತ್ತೆಯಾಗಿರುವವರು ಅಕ್ಷಯ್, ವೇಣುಗೋಪಾಲ್, ಮಾನ್ವಿತ್ ಹಾಗೂ ಅಮೋಘ್ ಎಂಬ ವಿಧ್ಯಾರ್ಥಿಗಳು ಎಂದು ತಿಳಿದುಬಂದಿದ್ದು ಇವರುಗಳು ನವೆಂಬರ್ 2ರ ರಾತ್ರಿ ಎಂಟು ಗಂಟೆಯಿಂದ ಕಾಣೆಯಾಗಿದ್ದಾರೆ ಎಂದು ತಿಳಿಯಲಾಗಿದೆ.
ನಾಲ್ಕೂ ಬಾಲಕರು ಸಹ 10ನೇ ತರಗತಿ ಓದುತಿದ್ದರು. ಈ ಕುರಿತು ವಸತಿ ಶಾಲೆಯ ನಿಲಯದ ಅಧಿಕಾರಿಗಳು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಜಯಪುರ ಪೊಲೀಸ್ ಠಾಣೆ 9480805047 ಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 0821 -2418612 ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.