ಕನಕಪುರ: ನಗರದ ರೂರಲ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.
ಬೆಂಗಳೂರಿನ ಕಲ್ಪ ಪೌಂಡೇಶನ್ ಸಹಯೋಗದೊ ಂದಿಗೆ ಆಯೋಜಿಸಿದ್ದ ಶಿಬಿರದಲ್ಲಿ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರದ ಸದುಪಯೋಗ ಪಡೆದುಕೊಂಡರು.
ಶಿಬಿರದಲ್ಲಿ ಉಚಿತವಾಗಿ ರಕ್ತದೊತ್ತಡ, ಮಧುಮೇಹ, ಕೊಲೆಸ್ಟ್ರಾಲ್, ಹೈಪಟೈಸಿಸ್, ಬಿ. ವೈರಸ್ ಟೆಸ್ಟ್ ಗಳನ್ನು ಮಾಡಲಾಯಿತು,ದೃಷಿದೋಷ ಉಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಇದೇ ವೇಳೆ ವಿತರಿಸಲಾಯಿತು,ಕಾಲೇಜಿನ ಎನ್. ಎಸ್. ಎಸ್. ಅಧಿಕಾರಿ ಜಗದೀಶ್, ಪ್ರಾಂಶುಪಾಲ ದೇವರಾಜು, ಉಪನ್ಯಾಸಕರಾದ ಸುಷ್ಮಾ ಮೋಹನ್ ಕುಮಾರ್, ಪ್ರಶಾಂತ್ ಸೇರಿದಂತೆ ವಿದ್ಯಾರ್ಥಿ ಗಳು ಹಾಗೂ ಕಲ್ಪ ಪೌಂಡೇಶನ್ ಸಂಸ್ಥೆಯ ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.