ನೆಲಮಂಗಲ: ರೋಗಗಳು ಬರುವ ಮನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು ಎಂದು ಕನಸು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ಎನ್ ಮುಖ್ಯಸ್ತೇ ವೀಣಾ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೋಕು ತ್ಯಾಮಗೊಂಡ್ಲು ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕನಸು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ಎನ್ ಮತ್ತು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದೊಂದಿಗೆ ಆಯೋಜಿಸಿದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಾಲೆಯ 150 ಕ್ಕೂ ಹೆಚ್ಚು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.ಇದೆ ಸಂದರ್ಭದಲ್ಲಿ ಕನಸು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಹೈಟೆಕ್ ರಾಜು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ.
ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ನಾನು ಕೂಡ ಗ್ರಾಮೀಣ ಹಳ್ಳಿ ಹಿನ್ನೆಲೆಯಿಂದ ಬಂದಿದ್ದೇನೆ. ಬಡತನದ ಪರಿಚಯವೂನನಗೆ ಇದ್ದು ಒಂದು ಉನ್ನತ ಸ್ಥಾನದ ಹೊಣೆ ಹೊಂದಿದ ಮೇಲೆ ಬಡ ಜನರ ಸೇವೆಯನ್ನು ಅವರ ಋಣವನ್ನು ಈ ರೀತಿಯ ಆರೋಗ್ಯ ಶಿಬಿರಗಳ ಮೂಲಕವೇ ತೀರಿಸಲು ಸಾಧ್ಯ ಎಂಬುದನ್ನು ಅರಿತಿದದೇನೆ ಎಂದರು.
ಸಂದರ್ಭದಲ್ಲಿ ಟ್ರಸ್ಟ್ ನಿರ್ದೇಶಕ ಹೈಟೆಕ್ ರಾಜು, ಟ್ರಸ್ಟ್ ಮುಖ್ಯಸ್ತೇ ವೀಣಾ, ಬೆಳಗಾವಿ ರಾಜು, ಮುತ್ತು,ಡಾಕ್ಟರ್ ರಾಹುಲ್,ಪ್ರಯೋಗಾಲಯ ತಂತ್ರಜ್ಞ ಲಿಂಗರಾಜು, ನೇತ್ರ ಪರೀಕ್ಷಕ ಹೇಮಂತ್, ಸುರೇಶ್, ಬೆಟ್ಟಹಳ್ಳಿ ರುದ್ರೇಶ್,ವಿಕಾಸ್, ಹರ್ಷ, ಮೂರ್ತಿ, ಮತ್ತಿತರು ಪಾಲ್ಗೊಂಡಿದ್ದರು.