ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01
ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
ಬೆಂ.ಗ್ರಾ.ಜಿಲ್ಲೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾ.18 ಬುಧವಾರದಿಂದ ಏ.2 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿAದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418, ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ



