ದೇವನಹಳ್ಳಿ : ಬೆಂಗಳೂರು ಗ್ರಾಮಾಂ ತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ||ಕೆ.ಎನ್.ಅನುರಾಧರವರು ಬೂದಿಗೆರೆ ಗ್ರಾಮ ಪಂಚಾಯಿತಿಗೆ ಬೇಟಿ ನೀಡಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಲ್ಲಿನ ಗ್ರಾಮಗಳ ಮಾಹಿತಿ ಪಡೆದು ಓವರ್ ಹೆಡ್ ಟ್ಯಾಂಕ್ ಮತ್ತು ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ಶುದ್ಧ ಕುಡಿಯುವ ನೀರಿನ ಘಟಕ ಸ್ಥಾವರದ ಸುತ್ತ ಮುತ್ತ ಶುದ್ಧವಾಗಿಡಲು ಸೂಚಿಸಿದರು.ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಭರತ್ RWS ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ವರಲಕ್ಷ್ಮಿ ಗಂಗನರಸಯ್ಯ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.