ಬೆಂಗಳೂರು: ಕೇಂದ್ರ ಸರ್ಕಾರದ ಜಿರಾಮ್ಜೀ ಯೋಜನೆ ವಿಧಾನಸಭೆಯಲ್ಲಿಂದು ಪ್ರಸ್ತಾಪವಾಗಿ ಆಡಳಿತ-ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ನಡೆದು ಕಲಾಪ ಕೆಲ ಕಾಲ ಮುಂದೂಡಿದ ಪ್ರಸಂಗ ನಡೆಯಿತು.
ವಿಪಕ್ಷ ಬಿಜೆಪಿಯ ಹಿರಿಯ ಶಾಸಕ ಎಸ್. ಸುರೇಶ್ಕುಮಾರ್ ಅವರು ಪ್ರಸ್ತಾಪಿಸಿ ಜಿ ರಾಮ್ಜೀ ಯೋಜನೆ ಬಗ್ಗೆ ರಾಜ್ಯ ಸರ್ಕಾರ ವಿರುದ್ಧವಾಗಿ ಜಾಹೀರಾತು ನೀಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದಾಗ ಸಚಿವ ಪ್ರಿಯಾಂಕ ಖರ್ಗೆ ನೀಡಿದ ಉತ್ತರದಿಂದ ಪ್ರತಿಪಕ್ಷಗಳ ಸದಸ್ಯರು ಕೆರಳಿದರು.
ಈ ಸಂದರ್ಭದಲ್ಲಿ ಒಂದು ಹಂತದಲ್ಲಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಯಾರಪ್ಪನ ಮನೆ ದುಡ್ಡು ಎಂದು ಜಾಹೀರಾತು ನೀಡಿದ್ದೀರಿ ಎಂದಾಗ ಆಡಳಿತಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆದವು.
ಸದನದಲ್ಲಿ ಗದ್ದಲದ ವಾತಾವರಣ ಉಂಟಾದ ಪರಿಣಾಮ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕಲಾಪವನ್ನು ಕೆಲ ಕಾಲ ಮುಂದೂಡಿದರು.
ಜಿ ರಾಮ್ಜೀ ಯೋಜನೆ : ವಿಧಾನಸಭೆಯಲ್ಲಿ ಪ್ರಸ್ತಾಪ ಆಡಳಿತ-ವಿಪಕ್ಷಗಳ ನಡುವೆ ಗದ್ದಲ



