ಗಣೇಶ್ ನಾಯಕನಾಗಿರುವ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ “ಬೃಂದಾ ವಿಹಾರಿ” ಚಿತ್ರ ಅಕ್ಟೋಬರ್ 16 ಬಿಡುಗಡೆಯಾಗುತ್ತಿದೆ. ಗಣೇಶ್ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿ ಬಿಡುಗಡೆ ಮಾಹಿತಿ ನೀಡಲಾಗಿದೆ. ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಗಣೇಶ್ ಜೊತೆಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.



