ವಿಶ್ವಪ್ರಸಾದ್ ನಿರ್ಮಿಸುತ್ತಿರುವ, ಧನಂಜಯ್ ನಿರ್ದೇಶನದ ಗಣೇಶ್ ನಾಯಕರಾಗಿ ನಟಿಸಿರುವ `ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ಕ್ಕೆ ಬಿಡುಗಡೆಯಾಗುತ್ತಿದೆ. ಗಣೇಶ್ ಹುಟ್ಟುಹಬ್ಬದಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಪಿನಾಕ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿತು. ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ!!



