ನವದೆಹಲಿ: 2019 ರಿಂದ ಮಹಿಳಾ ಕ್ರಿಕೆಟ್ ಸಾಕಷ್ಟು ಬೆಳವಣಿಗೆ ಕಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ತಲುಪುತ್ತಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್, ಹರ್ಮನ್ಪ್ರೀತ್ ಕೌರ್, ಸ್ಮೃತಿ ಮಂದಾನಾ ಅವರಂಥ ಆಟಗಾರ್ತಿಯರು ಪ್ರವರ್ಧಮಾನಕ್ಕೆ ಬಂದಿದ್ದು, 3-4 ವರ್ಷಗಳಿಂದ ಕೆಲವು ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ ತಂಡದ ಉತ್ತಮ ಸಾಧನೆಯಿಂದ ಇದು ಸಾಧ್ಯವಾಗಿದೆ ಎಂದು ಗಂಗೂಲಿ ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದರು.