ಮಂಡ್ಯ : ರಾಜ್ಯ ರಾಜಕಾರಣದಲ್ಲಿ ಸಿಎಂ ವಿಚಾರವಾಗಿ ಜಟಾಪಟಿ ನಡೆಯುತ್ತಿದ್ದು, ಮಂಡ್ಯ ನಗರದಲ್ಲಿ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅನ್ನುವುದು ನನ್ನ ಅಭಿಪ್ರಾಯ. ಅದಕ್ಕೊಂದು ಸೂಕ್ತ ಸಮಯ ಬರಲಿದೆ ನನ್ನ ಕಷ್ಟಕಾಲದಲ್ಲಿ ಡಿಕೆ ಶಿವಕುಮಾರ್ ಜೊತೆಗೆ ಇದ್ದಾರೆ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಹೇಳಿದರು.
ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬದ್ಧರಾಗಿರುತ್ತಾರೆ. ಅಧಿಕಾರ ಹಂಚಿಕೆಯ ಕುರಿತ ಮಾತುಕತೆ ವೇಳೆ ನಾವ್ಯಾರು ಇರಲಿಲ್ಲ. ಒಂದು ವೇಳೆ ಮಾತು ಕೊಟ್ಟಿದ್ದಾರೆ ಅದರಂತೆ ಸಿಎಂ ಸಿದ್ದರಾಮಯ್ಯ ನಡೆದುಕೊಳ್ಳಲಿ. ೧೪೦ ಶಾಸಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪರವಾಗಿ ಇದ್ದಾರೆ.
೨೦೨೮ಕ್ಕೂ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಇಬ್ಬರೂ ಹೋರಾಟ ಮಾಡಿ ಪಕ್ಷವನ್ನು ಕಟ್ಟಿದ್ದಾರೆ ಎಲ್ಲಾ ಗೊಂದಲಗಳಿಗೆ ಕಾಂಗ್ರೆಸ್ ಹೈ ಕಮಾಂಡ್ ತೆರೆ ಎಳೆಯಲಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿಕೆ ನೀಡಿದರು



